ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣಕ್ಕೂ ಮುನ್ನ ತಮ್ಮ ತಂದೆ ತಾಯಿಯ ಆಶೀರ್ವಾದ ಪಡೆದುಕೊಂಡಿದ್ದಾರೆ.ಕುಟುಂಬ ಸಮೇತರಾಗಿ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ತಂದೆ ಬಿಎಸ್ ಯಡಿಯೂರಪ್ಪ ಅರ್ಶಿವಾದ ಪಡೆದಿಕೊಂಡಿದ್ದಾರೆ. ಇಂದು ನೂತನ 11ನೇ ಬಿಜೆಪಿ ರಾಜ್ಯಾಧ್ಯಕ್ಷ ಆಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಆಯ್ಕೆಯಾಗಿ ಮಿಂಚಿನ ಸಂಚಲನಕ್ಕೆ ಕಾರಣವಾಗಿರುವ ಬಿವೈ ವಿಜಯೇಂದ್ರ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಸಮಾರಂಭ ನಡೆಯುತ್ತಿದೆ.