ಬೆಳಗಾವಿ : ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ಇಂದು ಬಿರುಸಿನ ಮತದಾನ ನಡೆಯುತ್ತಿದ್ದು ಬಿಜೆಪಿ ಶಾಸಕ ಅನಿಲ್ ಬೆನಕೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಬೆಳಗಾವಿ ನಗರದ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದ ಬೆಳಗಾವಿ ಉತ್ತರ ಬಿಜೆಪಿ ಶಾಸಕ ಅನಿಲ್ ಬೆನಕೆ ವಿಶ್ವೇಶ್ವರಯ್ಯ ನಗರದ ಸರ್ಕಾರಿ ಶಾಲೆಯ ಮತಗಟ್ಟೆಗೆ ಭೇಟಿ ನೀಡಿ ಮತಕೇಂದ್ರದೊಳಗೆ ತೆರಳಿದರು.ಮತ ಕೇಂದ್ರದ ಒಳಗೆ ತೆರಳುವ ವೇಳೆ ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಮೊಬೈಲ್