ರಿಯಾಯ್ತಿ ದರದಲ್ಲಿ ಬಿಡಿಎ ಫ್ಲ್ಯಾಟ್ ಗಳನ್ನು ನೀಡಲು ಮುಂದಾಗಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರನ್ನ ವಕೀಲರ ಸಂಘದಿಂದ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ರಿಯಾಯ್ತಿ ದರದಲ್ಲಿ ಫ್ಲ್ಯಾಟ್ ನೀಡುವಂತೆ ನಮ್ಮ ಸಂಘ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿರುವ ವಿಶ್ವನಾಥ್ ಮತ್ತು ಬಿಡಿಎ ಆಯುಕ್ತ ಕುಮಾರ್ ನಾಯಕ್ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ. ಅಲ್ಲದೇ, ಬಿಡಿಎ ಉಸ್ತುವಾರಿಯನ್ನೂ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಶೇಷವಾಗಿ