ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅವಹೇಳನಕಾರಿಯಾಗಿ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ದಿನಪತ್ರಿಕೆ ‘ವಿಶ್ವವಾಣಿ’ಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಎದುರು ಹಾಜರಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ.