ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ಯಡಿಯೂರಪ್ಪನವರ ʼಕಾವೇರಿʼ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.ಸಚಿವ ಸಂಪುಟ ಪುನಾರಚನೆ ಹಿನ್ನಲೆಯಲ್ಲಿ ಉಭಯತ್ರಯರ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಇತ್ತೀಚೆಗಷ್ಟೇ ನವದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದು, ಯಡಿಯೂರಪ್ಪನವರ ಜೊತೆಗಿನ ಇಂದಿನ ಭೇಟಿಯಲ್ಲಿ ಈ ವಿಷಯವೂ ಚರ್ಚೆಯಾಗಿದೆ ಎನ್ನಲಾಗಿದೆ.ಬಸವರಾಜ ಬೊಮ್ಮಾಯಿಯವರ ಸಂಪುಟಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಉತ್ತರ ಸಿಗಲಿದೆ.