ಬೆಂಗಳೂರು : ಆಧುನಿಕ ಯುಗದಲ್ಲಿ ತಂತ್ರಜ್ಞಾನ ಮುಂದುವರಿದಂತೆ, ವರದಿಯನ್ನು ಮುಟ್ಟಿಸುವಲ್ಲಿ ವೇಗ ಕಂಡಿದ್ದು, ಅದರಂತೆ ಪತ್ರಿಕಾ ರಂಗದಲ್ಲಿ ಪತ್ರಕರ್ತರು ತಮ್ಮ ವೃತ್ತಿ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕೆಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.ಇಂದು ಕಬ್ಬನ್ ಪಾರ್ಕ್ ಪ್ರೆಸ್ ಕ್ಲಬ್ನಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಹಮ್ಮಿಕೊಂಡಿದ್ದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪ್ರಕರ್ತರಿಗೆ ಟ್ಯಾಬ್ ವಿತರಣೆ ಸಮಾರಂಭದ ಉದ್ಘಾಟನೆ ನೆರವೇರಿಸಿ 16 ಪತ್ರಕರ್ತರಿಗೆ ಟ್ಯಾಬ್ಗಳನ್ನು ವಿತರಣೆ ಮಾಡಿ ಮಾತನಾಡಿದ ಸಚಿವರು,