ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಸಲದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿಕಂಠ ಗಾಯನ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ವಿಶೇಷ ಕಾರ್ಯಕ್ರಮದಲ್ಲಿ ಒಂದು ಕೋಟಿ ಜನರು ಭಾಗವಹಿಸ್ತಿರೋದು ಎಲ್ಲರಿಗೂ ಗೊತ್ತಿರುವ ವಿಷಯ.ಹೊಸ ಸುದ್ದಿ ಏನಂದ್ರೆ, ಈಗಾಗಲೇ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬರೋಬ್ಬರಿ 1.10 ಕೋಟಿಯಷ್ಟು ಜನರು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಜನಸ್ಪಂದನೆ ವ್ಯಕ್ತವಾಗಿದೆ.