ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಯ ಸಂಕಟಕ್ಕೆ ಕಾಂಗ್ರೆಸ್ ಸಿಲುಕಿದೆ. ರಾಜ್ಯ ಕಾಂಗ್ರೆಸ್ ನಾಯಕರು ಸಂಪುಟ ವಿಸ್ತರಣೆಗೆ ಹೈಕಮಾಂಡ್ನ ಕದ ತಟ್ಟಲು ಮುಂದಾಗಿದ್ದು, ಸಂಪುಟ ವಿಸ್ತರಣೆಯಾಗದಿದ್ದರೆ ಶಾಸಕರ ಅತೃಪ್ತಿ, ಅಸಮಾಧಾನ ಸ್ಫೋಟವಾಗಲಿದೆ. ಬಿಜೆಪಿ ಸೆಳೆತದಿಂದ ಶಾಸಕರನ್ನು ದೂರ ಇಡುವುದು ಕಷ್ಟವಾಗುತ್ತದೆ ಎಂಬುದನ್ನು ಹೈಕಮಾಂಡ್ಗೆ ಮನವರಿಕೆ ಮಾಡಿಕೊಡಲು ತೀರ್ಮಾನಿಸಿದ್ದಾರೆ.ಸಚಿವಾಕಾಂಕ್ಷಿ ಶಾಸಕರುಗಳು ಬೆಳಗಾವಿಯಲ್ಲಿ ಡಿ. 10 ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಆಗಲೇಬೇಕು. ಇಲ್ಲದಿದ್ದರೆ ನಮ್ಮ