ಬಿಜೆಪಿಯವರು ಅನಗತ್ಯವಾಗಿ ಕಾಂಗ್ರೆಸ್ ಪಕ್ಷದ ವಿರುದ್ಧ ಇಲ್ಲ ಸಲ್ಲದ ವರದಿಗಳನ್ನು ಹರಡಿಸುತ್ತಿದ್ದಾರೆ. ಇಂತಹ ಪೊಳ್ಳು ವರದಿಗಳಿಗೆ ಗಮನ ಕೊಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಮತದಾರರಿಗೆ ಸಲಹೆ ನೀಡಿದರು. ಕಾಂಗ್ರೆಸ್ ಪಕ್ಷದ ಪರವಾಗಿ ಹಣ ನೀಡುತ್ತಿದ್ದಾರೆ ಎನ್ನುವುದನ್ನು ಕೇಳಿದ್ದೇವೆ. ಆದರೆ, ನಮಗೆ ಹಣ ಕೊಟ್ಟಿಲ್ಲ ಸ್ವಾಮಿ ಎಂದು ಕೆಲ ಗ್ರಾಮಸ್ಥರು ನೇರವಾಗಿ ಕೇಳಿದಾಗ ಸಿಎಂ ಸಿದ್ದರಾಮಯ್ಯ ಆಘಾತಗೊಂಡಿದ್ದಾರೆ. ನೋಡಪ್ಪ ನಾನು ಯಾರಿಗೂ ದುಡ್ಡು ಕೊಟ್ಟಿಲ್ಲ. ನಿಮಗೆ ಯಾರೋ ಸುಳ್ಳು ಮಾಹಿತಿ ನೀಡಿದ್ದಾರೆ