ನಗರದಲ್ಲಿ ವಿದ್ಯಾರ್ಥಿಗಳೆಲ್ಲರೂ ಚುನಾವಣಾ ರಾಯಭಾರಿಗಳಾಗಿ ಕಾರ್ಯ ನಿರ್ವಹಿಸಿ, ತಮ್ಮ ಪೋಷಕರು, ಸ್ನೇಹಿತರು ಮತ್ತು ನೆರೆಹೊರೆಯಿಂದ ತಪ್ಪದೆ ಮತದಾನ ಮಾಡುವಂತೆ ನೋಡಿಕೊಳ್ಳುವುದರ ಜೊತೆಗೆ ಸ್ವತಃ ಮತಗಟ್ಟೆಗೆ ತೆರಳಿ ಮತದಾನ ಮಾಡಲು ಮಾನ್ಯ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ವಿದ್ಯಾರ್ಥಿಗಳಲ್ಲಿ ಕೋರಿದರು. ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆರ್.ಆರ್.ನಗರ ವಲಯ ವ್ಯಾಪ್ತಿಗೆ ಬರುವ ಆರ್.ವಿ ಇಂಜಿನಿಯರಿಂಗ್ ಕಾಲೇಜು ಹಾಗೂ ಪಿ.ಇ.ಎಸ್ ವಿಶ್ವವಿದ್ಯಾಲಯದಲ್ಲಿ