ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಮತ್ತು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ(GT & TC)ದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಮತದಾನದ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಅವರು ಇಂದು ಚಾಲನೆ ನೀಡಿದರು.