ಬೆಂಗಳೂರು (ಆ.06): ಹುಟ್ಟಹಬ್ಬದ ದಿನವೇ ಮುತ್ಸದ್ದಿ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್ ಚುನಾವಣಾ ರಾಜಕೀಯಕ್ಕೆ ಗುಡ್ಬೈ ಹೇಳಿದ್ದಾರೆ. ಮೈಸೂರಿನಲ್ಲಿಂದು ತಮ್ಮ ಚುನಾವಣಾ ವಿದಾಯದ ಬಗ್ಗೆ ಘೋಷಿಸಿದ ಸಂಸದ ಶ್ರೀನಿವಾಸ ಪ್ರಸಾದ್ ನಾನು ಇದುವರೆಗೆ 14 ಚುನಾವಣೆ ಎದುರಿಸಿದ್ದೇನೆ. 12ನೇ ಚುನಾವಣೆಯೇ ಸಾಕಾಗಿತ್ತು. ಕಂದಾಯ ಸಚಿವನಾಗಿ ಅವಧಿ ಪೂರ್ಣಗೊಳಿಸಲು ಎರಡು ವರ್ಷ ಅವಕಾಶ ನೀಡಿದ್ದರೆ ಸಾಕಿತ್ತು. ಆದರೆ ಅನಿವಾರ್ಯವಾಗಿ ಮತ್ತೆರಡು ಚುನಾವಣೆ ಎದುರಿಸಬೇಕಾಯ್ತು ಎಂದು ತಮ್ಮ ಅನುಭವವನ್ನು ಹಂಚಿಕೊಂಡರು. ಅದೇ ನನ್ನ