ಬೀಜಾಡಿ ಸರ್ವಿಸ್ ರಸ್ತೆ ಕಾಮಗಾರಿಗೆ ಅಧಿಕಾರಿಗಳ ನಿರೀಕ್ಷೆಯಲ್ಲಿ ಜನರು ಕಾದು ಸುಸ್ತಾದ ಘಟನೆ ನಡೆದಿದೆ. ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರ ಕಚೇರಿಯಿಂದ ಹೆದ್ದಾರಿಗೆ ಸಂಬಂಧಪಟ್ಟ ಪಂಚಾಯಿತಿಗಳಿಗೆ ಸಂದೇಶವೊಂದು ಬಂದಿದ್ದು, ಸಂದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಬಗ್ಗೆ ಎಲ್ಲೆಲ್ಲಿ ಸಮಸ್ಯೆಗಳಿವೆ ಅಲ್ಲಲ್ಲಿನ ಸಾರ್ವಜನಿಕರು ಸಮಸ್ಯೆಗಳ ಪಟ್ಟಿ ಮಾಡಿ ಅಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಲಾಗಿತ್ತು. ಅದರಂತೆ ಬೀಜಾಡಿ ಸರ್ವಿಸ್ ರೋಡ್ ಕಳೆದ ನವೆಂಬರ್ ನಲ್ಲಿ ಅಗೆದು ಹಾಕಿ ಹೋದ ನವಯುಗ ಕಂಪನಿ