ಧರ್ಮವನ್ನು ಯಾರು ಕಾಪಾಡುತ್ತಾರೋ ಅವರನ್ನು ಧರ್ಮ ಕಾಪಾಡುತ್ತದೆ. ಅದರಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ತಲಕಾವೇರಿಗೆ ಬಂದು ಪೂಜೆ ಸಲ್ಲಿಸುವ ಕಾರ್ಯ ಮಾಡಿದ್ದಾರೆ. ಧರ್ಮದಿಂದ, ಸುಭೀಕ್ಷೆಯಿಂದ ರಾಜ್ಯವನ್ನು ನಡೆಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ತಲಕಾವೇರಿಯಲ್ಲಿ ಜಲ ಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ. ಕಾವೇರಿ ತಾಯಿಯ ಸನ್ನಿಧಾನಕ್ಕೆ ಬಂದು ಪೂಜೆ ಸಲ್ಲಿಸಲಾಗಿದೆ. ದುಃಖ ಹಾಗೂ ದಾರಿದ್ರ್ಯ ದೂರ ಮಾಡುವ ಶಕ್ತಿ ನೀಡುವಂತೆ