ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ನಡೆಸಿಲ್ಲ: ಎಂ.ಬಿ.ಪಾಟೀಲ್

ಬೆಂಗಳೂರು| Rajesh patil| Last Modified ಸೋಮವಾರ, 22 ಮೇ 2017 (18:37 IST)
ಸ್ಥಾನಕ್ಕೆ ಲಾಬಿ ನಡೆಸಿಲ್ಲ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ನೇಮಿಸಬೇಕು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಇದರಲ್ಲಿ ಲಾಬಿ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಹಲವಾರು ಹಿರಿಯ ಮುಖಂಡರಿದ್ದಾರೆ.ಹೈಕಮಾಂಡ್ ಯಾರನ್ನೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೂ ಸ್ವಾಗತಿಸುತ್ತಿವೆ ಎಂದರು.


ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್, ಹಿರಿಯ ಮುಖಂಡ ಆರ್‌.ಎಸ್.ಪಾಟೀಲ್, ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ ಸೇರಿದಂತೆ ಇತರ ಮುಖಂಡರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.




ಇದರಲ್ಲಿ ಇನ್ನಷ್ಟು ಓದಿ :