ಬಿಜೆಪಿ ಅವಧಿಯಲ್ಲಿ ನಡೆದ ಭ್ರಷ್ಟಾಚಾರ, ಅಕ್ರಮಗಳ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ಪತ್ರ ಬರೆದು 15 ದಿನಗಳಲ್ಲಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಯಾವುದೇ ರೀತಿ ತನಿಖೆ ನಡೆಸಲಿ, ಅದನ್ನು ಎದುರಿಸಲು ನಾವು ಸಿದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಧಿಕೃತ ನಿವಾಸದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಆದ ಹಗರಣ ತನಿಖೆ ವಿಚಾರಕ್ಕೆ