ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಹಿತದೃಷ್ಟಿಯಿಂದ ಫಾಲಿ ಎಸ್ ನಾರಿಮನ್ ಅವರ ವಾದ ಮಂಡಿಸಲಿ. ಇದಕ್ಕೆ ನಮ್ಮ ಆಕ್ಷೇಪವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ತೆಗೆದುಕೊಂಡ ನಿರ್ಣಯ ಸ್ವಾಗತರ್ಹವಾಗಿದ್ದು, ಎಲ್ಲರೂ ಸೇರಿ ಒಂದು ನಿರ್ಣಯಕ್ಕೆ ಬಂದಿದ್ದಾರೆ. ಹೀಗಾಗಿ ಈ ಕುರಿತು ಗೊಂದಲ ಸೃಷ್ಟಿಸುವುದು