ರಾಜ್ಯದಲ್ಲಿ ಇಲ್ಲಿಯವರೆಗೆ ಉತ್ತಮ ಮಳೆಯಾಗದಿದ್ದರಿಂದ ಜಲಾಶಯಗಳಲ್ಲಿ ನೀರಿನ ಮಟ್ಟ ತುಂಬಾ ಕಡಿಮೆಯಿದೆ. ನಾವು ಮಳೆಯನ್ನು ಉತ್ಪಾದಿಸುವುದಿಲ್ಲ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ಕಾವೇರಿ ನದಿ ನೀರು ಹಂಚಿಕೆ ಒಪ್ಪಂದದಂತೆ ನೀರು ಬಿಡಿ ಎನ್ನುವ ತಮಿಳುನಾಡಿನ ಬೇಡಿಕೆಗೆ ಸಚಿವ ಎಂ.ಬಿ.ಪಾಟೀಲ್ ಗರಂ ಆಗಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ತುಂಬಾ ಕಡಿಮೆಯಿದೆ. ನೀರಿಲ್ಲದಿರುವಾಗ ಹೇಗೆ ತಮಿಳುನಾಡಿಗೆ ನೀರು ಬಿಡುವುದು ಎಂದು ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ