ರಾಜ್ಯದಲ್ಲಿ ಏಕಾಏಕಿ ವಿದ್ಯುತ್ ದರ ಏರಿಕೆ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ, ನಾವು ವಿದ್ಯುತ್ ದರ ಏರಿಕೆ ಅನುಷ್ಠಾನ ತಂದಿಲ್ಲ. ವಿದ್ಯುತ್ ದರ ಏರಿಕೆ ನಮ್ಮ ಸರ್ಕಾರ ಮಾಡಿಲ್ಲ.ದರ ಏರಿಕೆ ವರದಿಯನ್ನು ನಾವು ಒಪ್ಪಿರಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ದರ ಏರಿಕೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ. ಇದರಿಂದಾಗಿ ದರ ಜಾಸ್ತಿ ಆಗಿದೆ ಎಂದು ರಾಜ್ಯ ಸರ್ಕಾರದ ನಡೆಯ ವಿರುದ್ಧ ಅಸಮಾಧಾನ ಹೊರಹಾಕಿದರು.ನಾನು ವಿಪಕ್ಷ ಸ್ಥಾನದ