ಬೆಳಗಾವಿ : 2023ಕ್ಕೆ ಜನರು ಆಶೀರ್ವಾದ ಮಾಡಿದರೆ, ನಾವು ಮತ್ತೆ ಅಧಿಕಾರಕ್ಕೆ ಬಂದರೆ 7 ಕೆಜಿ ಅಲ್ಲ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಶ್ವಾಸನೆ ನೀಡಿದರು.ರಾಮದುರ್ಗ ತಾಲೂಕಿನ ಅವರಾದಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣ ಮಾಡಿದ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಹದಿನೈದು ಲಕ್ಷ ಮನೆಗಳನ್ನ ಕಟ್ಟಿಸಿದ್ದೇನೆ.ಬಸವಣ್ಣನವರ ಜಯಂತಿ ದಿನ ಪ್ರಮಾಣ ವಚನ ಸ್ವೀಕರಿಸಿ ಜನರ ಭರವಸೆ ಈಡೇರಿಸಿದ್ದೇನೆ.