ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಶಿವಕುಮಾರ್ ನಾವು ಯಾರನ್ನೂ ಅಕ್ಕಿ ಪುಕ್ಸಟ್ಟೆ ಕೊಡಿ ಎಂದು ಕೇಳ್ತೀಲ್ಲ.ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ , ಆಪ್ಷನ್ ನೋಡ್ತಿದ್ದೇವೆ .ಅಕ್ಕಿಯನ್ನ ಬೇರೆ ರಾಜ್ಯದಿಂದ ತರುವ ಬಗ್ಗೆ ಮಾತುಕತೆ ನಡೆದಿದೆ .ನಿಮ್ಮ ಪಕ್ಷಕ್ಕಿಂತ ನಮ್ಮ ಪಕ್ಷ ವಿಭಿನ್ನವಾಗಿದೆ .ನಾವು ಕೊಟ್ಟ ಮಾತು ಉಳಿಸಿಕೊಳ್ತೇವೆ.ಸಿಎಂ, ಸಚಿವರು ದೆಹಲಿಗೆ ಹೋಗಿ ಯಾರನ್ನ ಭೇಟಿರಾಗಿದ್ದಾರೆ ಏನು ಮಾಡಿದ್ದಾರೋ ಗೊತ್ತಿಲ್ಲ .ನಾನು ದೆಹಲಿಗೆ ಹೋಗಿಲ್ಲ.ಹೋಗುವ ಟೈಮ್ ಬರುತ್ತದೆ ಹೋಗ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.