ಮುಂಬರುವ ವಿಧಾನಸಭೆ ಚುನಾವಣೆಗಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತಂತೆ ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ನಮಗೆ ಆಪರೇಶನ್ ಕಮಲದ ಅನುಭವವಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಟಾಂಗ್ ನೀಡಿದ್ದಾರೆ. ಚುನಾವಣೆಗಾಗಿ ಅಭ್ಯರ್ಥಿಗಳ ಪಟ್ಟಿಯನ್ನು ನಿಧಾನವಾಗಿ ಬಿಡುಗಡೆಗೊಳಿಸುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರಿಗೆ ಸಲಹೆ ನೀಡಿದ್ದಾಗಿ ಹೇಳಿದ್ದಾರೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಜೆಡಿಎಸ್ ಪಕ್ಷದ ಕಾರ್ಯಕಾರಿ ಸಮಿತಿ ಅಂತಿಮವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ ಎಂದು