ಜನತಾ ದಳ ಮತ್ತು ಕಾಂಗ್ರೆಸ್ ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡ ಪರಿಣಾಮ ಬಿಜೆಪಿಗೆ ಲಾಭವಾಗಿತ್ತು. ಈ ಬಾರಿ ಜನತಾದಳ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ನೇರವಾಗಿ ಲಾಭವಾಗಲಿದೆ ಎಂದು ನುಡಿದ ಬೈರತಿ ಸುರೇಶ್, ಕಾಂಗ್ರೆಸ್ ಸರ್ಕಾರ ಬಂದಾಗಿನಿಂದಲೂ ಬಿಜೆಪಿಯವರು ಇದು ಬಿದ್ದುಹೋಗುತ್ತದೆ ಎನ್ನುತ್ತಿದ್ದಾರೆ. ಬಿಜೆಪಿಯವರು ಹೇಳುವುದೆಲ್ಲ ಅಪ್ಪಟ ಸುಳ್ಳು ಎಂದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಮರಳಿದ್ದರಿಂದ ನಮಗೆ ಯಾವುದೇ