ಬೆಂಗಳೂರು : ಬಿಬಿಎಂಪಿ ಚುನಾವಣೆಗೆ ಈಗಿನಿಂದಲೇ ತಯಾರಿ ಮಾಡಲಿದ್ದೇವೆ.ಪಕ್ಷದ ವತಿಯಿಂದ ಬೂತ್ ಕಮಿಟಿ ಮತ್ತು ವಾರ್ಡ್ ಸಮಿತಿಗಳನ್ನು ಚುರುಕುಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ನಗರದ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇವತ್ತು ನಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.ಬಿಬಿಎಂಪಿ ವ್ಯಾಪ್ತಿಗೆ ಸಂಬಂಧಿಸಿದ ಜಿಲ್ಲಾ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ನನ್ನ ಸಚಿವಸಂಪುಟದ ಸಹೋದ್ಯೋಗಿಗಳ ಮತ್ತು