ನಮಗೆ ನಾವೇ ಸ್ವಯಂ ನಿರ್ಬಂಧ ಹಾಕಿಕೊಳ್ಳಬೇಕು. ಇದರಿಂದ ನಾನು ಹೊರತಾಗಿಲ್ಲ. ಎಲ್ಲರು ಸೇರಿ ಸಂಘಟನೆ ಉಳಿಸುವ ಕೆಲಸ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ. ಸಂಘಟನೆ ಬೆಳೆಸುವತ್ತ ಹೆಚ್ಚಿನ ಗಮನ ಹರಿಸಬೇಕು. ನಮ್ಮ ದಾರಿ ಮತ್ತು ಗುರಿ ಸ್ಪಷ್ಟವಾಗಿರಬೇಕು. ಅಂದಾಗ ಮಾತ್ರ ನಮ್ಮ ಗುರಿ ತಲುಪಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಪ್ರತಿಯೊಂದು ಜಿಲ್ಲೆಗೆ ಭೇಟಿ ನೀಡಿ ಬರಗಾಲದ ವಾಸ್ತವ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸುತ್ತೇನೆ.