ವಿಜಯಪುರ ತಾಲೂಕಿನ ನಿಡೋಣಿ ಗ್ರಾಮದಲ್ಲಿ ಬಸವೇಶ್ವರ ಪುತ್ಥಳಿಗೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅರ್ಜುನ್ ಗುಣದಾಳ, ಮಹೇಶ್ ಗುಣದಾಳ ಹಾಗೂ ರಮೇಶ್ ಪಾಟೀಲ್ ಎಂಬ ಆರೋಪಿಗಳನ್ನು ಬಬಲೇಶ್ವರ್ ಪೊಲೀಸರು ಬಂಧಿಸಿದ್ದಾರೆ. ಈ ಮೂವರು ಸಕ್ರೀಯ ಬಿಜೆಪಿ ಕಾರ್ಯಕರ್ತರ ಮಕ್ಕಳು ಎಂದು ತಿಳಿದು ಬಂದಿದೆ. ಎಪಿಎಂಸಿ ಚುನಾವಣೆಯಲ್ಲಿ ನಿಡೋಣಿ ಗ್ರಾಮದ ಜನರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಬೆಂಬಲ ನೀಡಿದ್ದರು. ಹೀಗಾಗಿ