ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಿದಲ್ಲಿ ಜಿಲ್ಲೆಯ ಇತರ ವಿಧಾನಸಭಾ ಕ್ಷೇತ್ರಗಳಿಗೂ ನೆರವಾಗುತ್ತದೆ ಎಂದು ತಿಳಿಸಿದ್ದಾರೆ. ನಮ್ಮ ಸಹೋದರರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವೆಲ್ಲರು ಒಟ್ಟಾಗಿದ್ದೇವೆ. ಒಟ್ಟಾಗಿ ನಿಮ್ಮ ಮುಂದೆ ಬರುತ್ತೇವೆ ಎಂದರು. ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ