ರಾಯಣ್ಣ ಬ್ರಿಗೇಡ್ ಬಗ್ಗೆ ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆಯಬಾರದಿತ್ತು. ಪಕ್ಷದಲ್ಲಿ ಕೆಲವರಿಗೆ ಅಸಮಾಧಾನ ಇದೆ. ಹೀಗಾಗೆ ನಾಳೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಭಿನ್ನಮತಿಯರ ಕುರಿತು ಚರ್ಚಿಸಲಾಗುತ್ತದೆ ಎಂದರು. ಎತ್ತಿನ ಹೊಳೆ ಯೋಜನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ವೈಜ್ಞಾನಿಕ