ರೌಡಿ ನಾಗ ಮಾಧ್ಯಮಗಳಿಗೆ ಹೇಳಿಕೆ ಕುರಿತಂತೆ ಗೃಹ ಸಚಿವ ಜಿ. ಪರಮೇಶ್ವರ್ ಅವರು, ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ರೌಡಿ ಶೀಟರ್ ನಾಗನ ಬಂಧನ ಕಾರ್ಯಾಚರಣೆ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಮಾತುಕತೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ನಾಗನ ಹೇಳಿಕೆಗಳನ್ನ ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದಾರೆ. ಮೊದಲು ನಾಗ ಸಿಗಬೇಕು, ಹೇಳಿಕೆಗಳನ್ನ ದಾಖಲಿಸಬೇಕು. ಆಮೇಲೆ ಯಾರ್ಯಾರು ಶಾಮೀಲಾಗಿದ್ದಾರೆ ಎಂಬುದು ಹೊರ ಬರಲಿದೆ. ಐಪಿಎಸ್ ಅಧಿಕಾರಿಗಳ