ರಾಮನಗರ : ಪಕ್ಷದ ಕಾರ್ಯಕರ್ತರೇ ನಮ್ಮ ಸ್ಟಾರ್ಗಳು, ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ ಎಂದು ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಸಿಎಂ ಬೊಮ್ಮಾಯಿ ಪರ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸುವ ವಿಚಾರದ ಬಗ್ಗೆ ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.ಬಿಜೆಪಿಗೆ ಬೆಂಬಲ ನೀಡುವುದಕ್ಕಿಂತಲೂ ಬೊಮ್ಮಾಯಿ ಅವರ ಜೊತೆಗಿನ ಸುದೀಪ್ ಆತ್ಮೀಯತೆ ಚಿಕ್ಕ ವಯಸ್ಸಿನಿಂದಲೂ ಇದೆ. ಹೀಗಾಗಿ ಅವರಿಗೆ ಗೌರವ ನೀಡಿ ಬೆಂಬಲಿಸುವುದಾಗಿ ಹೇಳಿದ್ದಾರೆ.