ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮನೆಗಳ ಮೇಲೆ ನಡೆಸಿರುವ ದಾಳಿಯಲ್ಲಿ ಕೇಂದ್ರದ ಕೈವಾಡವಿರುವುದು ಜಗಜ್ಜಾಹಿರವಾಗಿದೆ. ಆದರೆ, ಕೇಂದ್ರದ ಇಂತಹ ಗೊಡ್ಡು ಬೆದರಿಕೆಗಳಿಗೆ ಮಣಿಯೋಲ್ಲ ಎಂದು ಗುಡುಗಿದ್ದಾರೆ. ಹೊರರಾಜ್ಯದ ಐಟಿ ಅಧಿಕಾರಿಗಳು ದಾಳಿ ನಡೆಸುವಾಗಿ ಸ್ಥಳೀಯ ಪೊಲೀಸರ ನೆರವು ಪಡೆಯಬೇಕಾಗುತ್ತದೆ. ಆದರೆ, ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಸಿಆರ್ಪಿಎಫ್ ಸಿಬ್ಬಂದಿ ನೆರವು ಪಡೆದು ಕಾನೂನುಬಾಹಿರ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಐಟಿ ದಾಳಿಯಲ್ಲಿ ಪ್ರಧಾನಮಂತ್ರಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ