ನಾಡಗೀತೆಗೆ ಅಪಮಾನ ಸೇರಿದಂತೆ ವಿವಿಧ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ನಿರ್ಮಲಾನಂದ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ತೆಗೆದು ಹಾಕುವ ಬಗ್ಗೆ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.