ಲೋಕಾಯುಕ್ತ ನೇಮಕ ಕುರಿತು ರಾಜ್ಯಪಾಲರಿಗೆ ಸ್ಪಷ್ಟನೆ ನೀಡುತ್ತೇನೆ. ನೇಮಕಕ್ಕೆ ಹೊಸ ಹೆಸರನ್ನು ಶಿಫಾರಸ್ಸು ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ನೇಮಕಕ್ಕಾಗಿ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಹೆಸರನ್ನು ಶಿಫಾರಸ್ಸು ಮಾಡಲಾಗಿತ್ತು. ಆದರೆ, ರಾಜ್ಯ ಸರಕಾರದ ಶಿಫಾರಸ್ಸನ್ನು ರಾಜ್ಯಪಾಲರು ತಿರಸ್ಕರಿಸಿದ್ದರು. ಈ ಕುರಿತು ರಾಜ್ಯಪಾಲರಿಗೆ ಸ್ಪಷ್ಟನೆ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಲೋಕಾಯುಕ್ತ ಹುದ್ದೆಗೆ ರಾಜ್ಯ