ರಾಯಚೂರು : ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ ಎಂದು ಸಚಿವ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.ರಾಯಚೂರಿನ ಸಿಂಧನೂರು ತಾಲೂಕಿನ ಜವಳಗೇರಾದಲ್ಲಿ ಮೊರಾರ್ಜಿ ವಸತಿ ಶಾಲೆ ಉದ್ಘಾಟನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬದಲಾವಣೆ ತರಲು ನಾನು ಮತ್ತು ಸಿಎಂ ಬೊಮ್ಮಾಯಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ.ಮೊರಾರ್ಜಿ ವಸತಿ ಶಾಲೆಯಲ್ಲಿ 250 ವಿದ್ಯಾರ್ಥಿಗಳು ಇದ್ದಾರೆ. 11 ಎಕರೆ 20 ಗುಂಟೆ ಸ್ಥಳದಲ್ಲಿ ಶಾಲೆ ನಿರ್ಮಾಣ