ಬೆಂಗಳೂರು: ಆಗಸ್ಟ್ 23 ರಿಂದ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯ ರಾಜ್ಯದ ಕೆಲವು ಪ್ರದೇಶಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಆಗಸ್ಟ್ 23 ರಿಂದ ಕರಾವಳಿ ಮತ್ತು ಉತ್ತರ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಅದೇ ರೀತಿ ಉತ್ತರ ಒಳನಾಡಿನ ಧಾರವಾಡ, ಗದಗ,