ಬಿಜೆಪಿ ಮುಖಂಡ ಸೊಗಡು ಶಿವಣ್ಣ ಕಾಂಗ್ರೆಸ್ ಸಿದ್ದಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗುವುದಾದರೇ ಸ್ವಾಗತ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಪರಿವರ್ತನೆ ಯಾತ್ರೆ ಮೊದಲ ದಿನವೇ ವಿಫಲವಾಗಿದೆ. ಲಕ್ಷ ಲಕ್ಷ ಜನರು ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದರು. ಆದರೆ, ಅಲ್ಲಿ ಬಂದಿದ್ದು 20 ಸಾವಿರ ಕಾರ್ಯಕರ್ತರು ಎಂದು ಲೇವಡಿ ಮಾಡಿದ್ದಾರೆ. ಬಿಜೆಪಿ ನಾಯಕರ ನಡುವಳಿಕೆಯಿಂದ ಬಿಜೆಪಿ ಶಾಸಕರಿಗೆ