ಬೆಂಗಳೂರು : ಪ್ರಾದೇಶಿಕ ಪಕ್ಷದ ನಾಯಕರು ಒಂದೆಡೆ ಸೇರಿದಾಕ್ಷಣ ದೇಶದಲ್ಲಿ ತೃತೀಯ ರಂಗದಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಹೇಳಿಕೆಗೆ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಿರುಗೇಟು ನೀಡಿದ್ದಾರೆ. ಇಂದು ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲು ಆಗಮಿಸಿರುವ ಮಮತಾ ಬ್ಯಾನರ್ಜಿ ನಗರದ ಖಾಸಗಿ ಹೋಟೆಲ್ನಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿ ನಂತರ