ಮೈಸೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯು 15 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ 65 ವಾರ್ಡ್ಗಳ ಮಹಾಶಕ್ತಿ ಕೇಂದ್ರದ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಯಿಂದ ಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ರಾಜ್ಯದಲ್ಲಿ ಬಿಜೆಪಿ ಆಯೋಜಿಸಿದ್ದ ಜನಸ್ವರಾಜ್ ಸಮಾವೇಶದಲ್ಲಿ ಅದ್ಭುತ