ಬೆಟ್ಟದ ಮೇಲೆ ಪ್ರತ್ಯಕ್ಷವಾಗಿರೋ ಅದನ್ನು ಕಂಡಿರೋ ಜನರು ಹಗಲು, ರಾತ್ರಿ ಜೀವ ಭಯದಲ್ಲಿ ಕಾಲ ಕಳೆಯುವಂತಾಗಿದೆ. ಕಳೆದ ಎಂಟು ದಿನಗಳ ಹಿಂದೆ ಬೆಟ್ಟದ ಮೇಲೆ ಪ್ರತ್ಯಕ್ಷವಾಗಿದ್ದ ಚಿರತೆಯೊಂದು, ಇದೀಗ ಏಕಾಏಕಿ ಗ್ರಾಮದಲ್ಲಿ ಕಂಡು ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಉಪ್ಪರಪೇಟೆ ಗ್ರಾಮದ ಜನರ ನಿದ್ದೆ ಗೆಡಿಸಿದೆ.ಕಳೆದ ಎಂಟು ದಿನಗಳಿಂದ ಚಿರತೆಯೊಂದು ಪ್ರತ್ಯಕ್ಷವಾಗಿ ಗ್ರಾಮಸ್ಥರಿಗೆ ಹಾಗೂ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನಿಸುತ್ತಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಉಪ್ಪರಪೇಟೆ ಗ್ರಾಮದ