ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದ್ದು, ಈ ಬಗ್ಗೆ ಇದೀಗ ಡಿಸಿಎಂ ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.ವಿಕಾಸಸೌಧದಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟ ವಿಚಾರ. ಆದಷ್ಟು ಬೇಗ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಸಂಪುಟ ವಿಸ್ತರಣೆಯ ಬಗ್ಗೆ ಸಿಎಂ ಬಿಎಸ್ ವೈ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.ಅಲ್ಲದೇ ಬಿಜೆಪಿಯ ಪಕ್ಷದಲ್ಲಿ ಮೂಲ ಬಿಜೆಪಿಗರು, ವಲಸಿಗರು ಅಂತೇನೂ ಇಲ್ಲ.