ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಸಚಿವರ ಜೊತೆ ನಾವು ಮಾತನಾಡಿದ್ದೇವೆ. ಇಂದು ಮಧ್ಯಾಹ್ನ ಶಿಕ್ಷಣ ಸಚಿವರೇ ಮಾಹಿತಿ ನೀಡುತ್ತಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರವ ಹಿನ್ನಲೆಯಲ್ಲಿ ಪ್ರಸ್ತುತ ವೈದ್ಯಕೀಯ ಸಿಬ್ಬಂದಿ ಮತ್ತು ಪೊಲೀಸರ ಸೇವೆ ಅಗತ್ಯ . ಹೀಗಾಗಿ ಅವರ್ಯಾರಿಗೂ ರಜೆ ಯನ್ನು ನೀಡಲಾಗುವುದಿಲ್ಲ