ಕಾಂಗ್ರೆಸ್ ಜತೆ ಕೈ ಜೋಡಿಸಿದ್ದು ತಪ್ಪು ಎಂಬ ಹೆಚ್.ಡಿ.ಕೆ ಹೇಳಿಕೆಗೆ ಜಿ.ಟಿ.ದೇವೇಗೌಡ ಹೇಳಿದ್ದೇನು?

ಬೆಂಗಳೂರು| pavithra| Last Modified ಶುಕ್ರವಾರ, 11 ಡಿಸೆಂಬರ್ 2020 (12:58 IST)
ಬೆಂಗಳೂರು : ಕಾಂಗ್ರೆಸ್ ಜತೆ ಕೈ ಜೋಡಿಸಿದ್ದು ತಪ್ಪು ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರ ಕಾಂಗ್ರೆಸ್ ಜೊತೆ ಕೈಜೋಡಿಸುವಾಗ ನಮ್ಮ ಯಾವ ಶಾಸಕರ ಅಭಿಪ್ರಾಯವನ್ನು ಪಕ್ಷ ಕೇಳಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ದೇವೇಗೌಡ, ಕುಮಾರಸ್ವಾಮಿ ಸೇರಿ ತೀರ್ಮಾನಿಸಿದ್ದರು. ಜೆಡಿಎಸ್, ಕಾಂಗ್ರೆಸ್ ಸಚಿವರ ಜೊತೆ ಹೊಂದಾಣಿಕೆ ಇತ್ತು. ಕುಮಾರಸ್ವಾಮಿಗೆ ಆಗಿರುವ ಕಹಿ ಅನುಭವ ನನಗೆ ಗೊತ್ತಿಲ್ಲ. ಮಾಡಿ ಹೆಚ್.ಡಿ.ಕುಮಾರಸ್ವಾಮಿ ಹೆಸರು ಕೆಟ್ಟಿತ್ತು ಎಂದು ನನಗನಿಸಲ್ಲ. ಸರ್ಕಾರದಲ್ಲಿ ಕುಮಾರಸ್ವಾಮಿ ಒಳ್ಳೆ ಕೆಲಸವೇ ಮಾಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರು ಹೇಗೆ ಕೆಡುತ್ತೆ? ಏನನ್ನು ಮನಸ್ಸಿನಲ್ಲಿಟ್ಟುಕೊಂಡು ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದು ಅವರು ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :