ರಾಮನಗರ : ಬೆಂಗಳೂರಿನಲ್ಲಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕ್ ಪರ ಘೋಷಣೆ ಕೂಗಿದ್ದು ಖಂಡನೀಯ. ಯಾರೇ ಆದರೂ ಇದನ್ನು ಖಂಡಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮ ಆಯೋಜಕರು ಎಚ್ಚರಿಕೆಯಿಂದ ಇರಬೇಕು. ಅಮೂಲ್ಯ ಉದ್ದೇಶಪೂರ್ವಕವಾಗಿ ಘೋಷಣೆ ಕೂಗಿದ್ದಾಳೋ? ಅಥವಾ ಪ್ರಚಾರಕ್ಕಾಗಿ ಘೋಷಣೆ ಕೂಗಿದ್ದಾಳೋ ತಿಳಿಯಬೇಕು. ಹೀಗೆ ಮಾತನಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ.