ನಾಳೆಯಿಂದ ಕಾಲೇಜುಗಳ ಆರಂಭದ ಬಗ್ಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಹೇಳಿದ್ದೇನು?

ಬೆಂಗಳೂರು| pavithra| Last Modified ಸೋಮವಾರ, 16 ನವೆಂಬರ್ 2020 (14:00 IST)
ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ ಕಾಲೇಜುಗಳ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು ಆರಂಭಿಸುವುದಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ಈ ಬಾರಿ ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗುತ್ತಿದೆ ಆದ್ರೆ ಪಠ್ಯ ಕ್ರಮ ಕಡಿತ ಮಾಡಲ್ಲ. ಈ ವರ್ಷದಲ್ಲಿ ಪರೀಕ್ಷೆಗಳು ತಡವಾಗಿ ನಡೆಸಲಾಗುವುದು, ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಉಚಿತವಾಗಿ ಮಾಡಲಾಗ್ತಿದೆ. ಕೊರೊನಾ ಲಕ್ಷಣವಿದ್ದರೆ ಎಷ್ಟು ಬಾರಿ ಬೇಕಿದ್ದರೂ ಪರೀಕ್ಷೆ ಉಚಿತವಾಗಿ ಮಾಡಿಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜು ಆರಂಭವಾದ ಬಳಿಕ ಸಮಸ್ಯೆಗಳು ಎದುರಾದರೆ ಸಮಸ್ಯೆ ಬಗೆಹರಿಸುವುದಕ್ಕೆ ಇಲಾಖೆಯಿಂದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕಾಲೇಜಿಗೆ ವಿದ್ಯಾರ್ಥಿಗಳು ಸ್ವ ಇಚ್ಚೆಯಿಂದ ಬರಬೇಕು. ಇದರ ಜತೆಗೆ ವಿದ್ಯಾರ್ಥಿಗಳು ಮುನ್ನೇಚ್ಚರಿಕೆ ವಹಿಸಬೇಕು. ಹಾಸ್ಟೆಲ್ ಗಳಲ್ಲಿಯೂ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು  ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :