ಖಾತೆ ಹಂಚಿಕೆ ವಿಚಾರದ ಬಗ್ಗೆ ರಮೇಶ್ ಜಾರಕಿಹೊಳಿ ಹೇಳಿದ್ದೇನು?

ಬೆಂಗಳೂರು| pavithra| Last Modified ಶುಕ್ರವಾರ, 22 ಜನವರಿ 2021 (10:55 IST)
ಬೆಂಗಳೂರು : ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ಸಿಎಂ ಪರವಾಗಿ ಮಾತನಾಡಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಇದೀಗ ಸಚಿವ ಸಂಪುಟ ಮರುಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ಇದರಿಂದ ಹಲವು ನಾಯಕರ ಖಾತೆ ಅದಲು ಬದಲಾಗಿದೆ. ಇದರಿಂದ ಪಕ್ಷದ ನಾಯಕರು ಹಾಗೂ ವಲಸಿಗ ಸಚಿವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ರಮೇಶ್ ಜಾರಕಿಹೊಳಿ, ಖಾತೆ ಹಂಚಿಕೆ ಸಿಎಂ ಪರಮಾಧಿಕಾರ. ಖಾತೆ ಹಂಚಿಕೆ ವೇಳೆ ಅಸಮಾಧಾನಗೊಳ್ಳುವುದು ಸಹಜ. ಮಿತ್ರಮಂಡಳಿಯಲ್ಲಿ ಯಾವುದೇ ಅಸಮಾಧಾನವಿಲ್ಲ. ಸಿಎಂ ಜತೆ ಮಾತಾಡುವ ಸಮಯ ಬಂದ್ರೆ ಮಾತಾಡುವೆ ಎಂದು ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :