ರಾಜ್ಯದಲ್ಲಿ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರವಿದೆ. ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಹುದ್ದೆಯೇ ಖಾಲಿ ಇಲ್ಲ, ಹೀಗಿರುವಾಗ ಮತ್ತೆ ಮುಖ್ಯಮಂತ್ರಿಯಾಗುವ ಅವಕಾಶ ಎಲ್ಲಿದೆ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.ಕಾಂಗ್ರೆಸ್ ಶಾಸಕ ಗಣೇಶ್ ಸೇರಿದಂತೆ ಹಲವು ಶಾಸಕರು ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಬಯಸಿದ್ದಾರೆ. ಆ ಕುರಿತು ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ,