ಮೈಸೂರು : ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ದೇವೇಗೌಡರು, ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಇಲ್ಲ. ಆದಕಾರಣ ಮದ್ಯಂತರ ಚುನಾವಣೆ ನಡೆಯುವುದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದ್ದರು. ದೇವೇಗೌಡರ ಈ ಹೇಳಿಕೆಯನ್ನು ಕೇಳಿ ಬಿಜೆಪಿ ನಾಯಕರು ಮೈತ್ರಿ ಸರ್ಕಾರ ಬೀಳುವುದು ಖಚಿತ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯಡಿಯೂರಪ್ಪ ಕನಸುಗಳಿಗೆ ಉತ್ತರ ನೀಡಲು ಆಗುವುದಿಲ್ಲ. ಬಹಳ ದಿನಗಳಿಂದ