ವಿಜಯಪುರ : 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ಪರ ಜೆಡಿಎಸ್ ವರಿಷ್ಠ ದೇವೇಗೌಡರು ಹೇಳಿಕೆ ನೀಡಿದ್ದಕ್ಕೆ ಬಿಜೆಪಿ ಜೊತೆ ಜೆಡಿಎಸ್ ಒಳಒಪ್ಪಂದ ಮಾಡಿಕೊಂಡ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ 15 ಸ್ಥಾನ ಗೆಲ್ಲುತ್ತೇವೆಂದು ಹೇಳಿಲ್ಲ. 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತೆ ಎಂದು ಹೇಳಿದ್ದೇನೆ. ದೇವೇಗೌಡರು ಯಾಕೆ ಹಾಗೇ ಹೇಳಿದ್ದಾರೆಂದು ಗೊತ್ತಿಲ್ಲ. ಬಿಜೆಪಿ ಜೊತೆ ಜೆಡಿಎಸ್ ಒಳಒಪ್ಪಂದ ಮಾಡಿಕೊಂಡ