ಬೆಂಗಳೂರು : ಕೇಂದ್ರ ಸಚಿವ ಅನಂತಕುಮಾರ್ ಅವರ ಅಗಲಿಕೆಗೆ ಸಂತಾಪ ಸೂಚಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಂತಕುಮಾರ್ ಅವರು ಅಗಲಿಕೆಯಿಂದ ರಾಷ್ಟ್ರ ರಾಜಕಾರಣದಲ್ಲಿ ಬಹಳ ನಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸಚಿವರಾಗಿದ್ದ ಅನಂತ ಕುಮಾರ್ ಅವರು ಸಜ್ಜನ ಮತ್ತು ಸುಸಂಸ್ಕೃತ ರಾಜಕಾರಣಿಯಾಗಿದ್ದರು. ಬಹಳ ಚಿಕ್ಕ ವಯಸ್ಸಿನಲ್ಲಿಯೇ ಸಾರ್ವಜನಿಕ ಬದುಕಿನಲ್ಲಿ ತಮ್ಮನ್ನು ತೊಡಗಿಸಿಕೊಂಡು ಇಂದು ರಾಷ್ಟ್ರ ಮಟ್ಟದ ರಾಜಕಾರಣದವರೆಗೂ ಹೋಗಿದ್ದರು ಎಂದು ಹೇಳಿದ್ದಾರೆ.