ಬೆಂಗಳೂರು : ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಪಟ್ಟಕ್ಕಾಗಿ ಬಾರೀ ಪೈಪೋಟಿ ನಡೆಯುತ್ತಿದ್ದು, ಶ್ರೀರಾಮುಲು ಡಿಸಿಎಂ ಆಗಬೇಕು ಎನ್ನುವ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲೂ ಈ ಸುದ್ದಿ ಹರಿದಾಡುತಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ರಾಷ್ಟ್ರೀಯ ಅಧ್ಯಕ್ಷರು ಮತ್ತು ಸಿಎಂ ಯಡಿಯೂರಪ್ಪ ಈ ವಿಚಾರದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು. ಪಕ್ಷದ ನಿರ್ಧಾರವೇ ಅಂತಿಮ ನಿರ್ಧಾರ. ಪಕ್ಷಕ್ಕಾಗಿ ಕಾಯ ವಾಚ ಮನಸ್ಸು ಕೆಲಸ ಮಾಡುತ್ತೇವೆ. ಸ್ಥಾನಮಾನಕ್ಕೆ ರಾಜಕೀಯ